Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಯಶ್‌ ಕಾರಿನ ಗಾಜು ಪುಡಿ ಪುಡಿ!

$
0
0

ಯಾದಗಿರಿ: ರಾಕಿಂಗ್‌ ಸ್ಟಾರ್‌ ಯಶ್‌ ಕಾರ್ಯಕ್ರಮಕ್ಕೆ ತಡವಾಗಿ ಬಂದ ಕಾರಣ ಅಭಿಮಾನಿಗಳ ಕೋಪಕ್ಕೆ ಗುರಿಯಾದ ಘಟನೆ ನಿನ್ನೆ ಫೆಬ್ರವರಿ 27ರ ರಾತ್ರಿ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರುಪುರದಲ್ಲಿ ಆಯೋಜಿಸಲಾದ ರೈತರ ಸಂವಾದ ಕಾರ್ಯಕ್ರಮಕ್ಕೆ ಯಶ್‌ ತಡವಾಗಿ ಬಂದಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ.

ಹೀಗಾಗಿ ಅಭಿಮಾನಿಗಳು ಯಶ್‌ ಕಾರಿನ ಮೇಲೆ ಮುಗಿಬಿದ್ದ ಕಾರಣ ವಾಹನದ ಗಾಜು ಪುಡಿ ಪುಡಿಯಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯಶ್‌, ಅಭಿಮಾನಿಗಳಾದರೂ, ಈ ರೀತಿ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ 'ಯಶೋಮಾರ್ಗ' ಕಾರ್ಯಕ್ರಮದ ಅಂಗವಾಗಿ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಬರ ಅಧ್ಯಯನದಲ್ಲಿ ತೊಡಗಿರುವ ಯಶ್‌, ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ರೈತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.


Viewing all articles
Browse latest Browse all 7056

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ