ನವಸಾರಿ: ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನವಸಾರಿ ಜಿಲ್ಲೆಯ ಸೂಪಾ ಗ್ರಾಮದ ಬಳಿ ಪೂರ್ಣಾ ನದಿಗೆ ಉರುಳಿದ ಪರಿಣಾಮ 37 ಪ್ರಯಾಣಿಕರು ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸುಮಾರು 20 ಅಡಿ ಎತ್ತರದ ಸೇತುವೆಯ ಮೇಲೆ ಬಸ್ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅವಘಢ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಎಂ ಸಂತಾಪ: ಈ ಮಧ್ಯೆ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ದುರಂತದಲ್ಲಿ ಮಡಿದವರ ಬಗ್ಗೆ ಕಂಬನಿ ಮಿಡಿದಿದ್ದಾರೆ. ತನಿಖೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
↧
ನದಿಗೆ ಉರುಳಿದ ಬಸ್: 37 ಸಾವು
↧